ಸುದ್ದಿಬಿಂದು ಬ್ಯೂರೋ ವರದಿ
ಹೊನ್ನಾವರ : ರಾಷ್ಟೀಯ ಹೆದ್ದಾರಿ 66ರಲ್ಲಿ ಸಾಲಿಕೇರಿ- ಹಳದಿಪುರ ಬಳಿ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿ ಓರ್ವನಿಗೆ ವಾಹನ ಡಿಕ್ಕಿ ಹೊಡೆದು ಆತ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಮೃತ ವ್ಯಕ್ತಿಗೆ ಅಂದಾಜು 40ರಿಂದ 50 ವರ್ಷವಾಗಿರಬಹುದು ಎನ್ನಲಾಗಿದೆ. ಮೃತ ವ್ಯಕ್ತಿ ಹಳದಿ ಬಣ್ಣಸ ಟೀ ಶರ್ಟ್ ಧರಿಸಿದ್ದು,ಆದರೆ ಇದುವರೆಗೆ ಆತನ ಗುರುತು ಪತ್ತೆತಾಗಿಲ್ಲ. ಅಪಘಾತದ ರಭಸಕ್ಕೆ ತಲೆ ಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಹಾಗೂ ಪೊಲೀಸ್ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದಲ್ಲಿ ಮೃತ ಪಟ್ಟ ವ್ಯಕ್ತಿಯ ಶವವನ್ನ ಹೊನ್ನಾವರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗಮನಿಸಿ
- Teacher suspended/ವಿದ್ಯಾರ್ಥಿಗೆ ಥಳಿಸಿದ ಪ್ರಕರಣ : ಶಿಕ್ಷಕಿ ಅಮಾನತು.
- Varamahalakshmi Festival, ಶ್ರಾವಣದ ಶುಕ್ರವಾರ, ಮನೆ ಮನೆಗಳಲ್ಲಿ ವರಮಹಾಲಕ್ಷ್ಮಿ ಭಕ್ತಿ ಸಡಗರ
- Teacher/ಪಾಠ ಕಲಿಯಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗೆ ಥಳಿತ : ಬಾಸುಂಡೆ ಮೂಡಿಸಿದ ಶಿಕ್ಷಕಿ
- ಭಟ್ಕಳದ ಹಳೆಯ ಕಾಲ ಮುಕ್ತಾಯ – ನಗರಸಭೆಯ ಹೊಸ ಯುಗ ಆರಂಭ ! ಮಂಕಾಳು ವೈದ್ಯ ಸಚಿವರಾದ ಬಳಿಕ ಭಟ್ಕಳಿಗರ ಕನಸು ನನಸು