ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ದಿನಕರ ಶೆಟ್ಟಿ ಅವರು ಪ್ರಯಾಣಿಸುತ್ತಿದ್ದ ಕಾರ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹೊನ್ನಾವರ ಸಮೀಪ ರಾಷ್ಟೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಅಪಘಾತದಲ್ಲಿ ಹಳದಿಪುರದ ಬಸ್ರಾಣಿ ನಿವಾಸಿ ನಾಗಪ್ಪ ಗೌಡನಿ ಎಂಬಾತನಿಗೆ ಗಾಯವಾಗಿದೆ. ಶಾಸಕರ ಕಾರು ಹೊನ್ನಾವರದ ಕರ್ಕಿ ನಾಕ ಬಳಿ ಹೊಟೆಲ್ ನಿಂದ ಹೊರುಡುವಾಗ ಕಾರು ಚಾಲಕ ಕಾರನ್ನು ಹಿಂದಕ್ಕೆ ತೆಗೆಯುವಾಗ ಬೈಕ್ ಸವಾರ ಹಿಂದುಗಡೆ ಬಂದು ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಗಾಯಗೊಂಡಿದ್ದಾನೆ.
ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಗೆ 108ನಲ್ಲಿ ಹೊನ್ನಾವರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ..ಹೊನ್ನಾವರ ಸರಕಾರಿ ಆಸ್ಪತ್ರೆಯಿಂದ ಗಾಯಾಳುವನ್ನ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಕ್ಕೆ ರವಾನಿಸಲಾಗಿದೆ. ಹೊನ್ನಾವರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಗಮನಿಸಿ