ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಅನಾರೋಗ್ಯದಿಂದ ಬಳಲುತ್ತಿದ್ದ ವೃಕ್ಷ ಮಾತೆ ಪದ್ಮಶ್ರಿ ಪುರಸ್ಕೃತೆ ತುಳಸಿ ಗೌಡ. ಅವರು ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರಿಗೆ 87ವಯಸ್ಸಾಗಿದ್ದು, ಇವರು ಕಳೆದ ಅನೇಕ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಇವರು ತಮ್ಮ ಇಳಿ ವಯಸ್ಸಿನಲ್ಲಿಯೂ ಪರಿಸರ ಕಾಳಜಿ ಹೊಂದಿದ್ದರು, ಪರಿಸರ ಕಾಳಜಿ ಮತ್ತು ಸಾಲು ಸಾಲು ಗಿಡ ನೆಟ್ಟು ಪೋಷಿಸಿ ಬೆಳಸಿದ್ದರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ನಿವಾಸಿಯಾಗಿದ್ದ ತುಳಸಿ ಗೌಡ, ಪರಿಸರ ಕಾಳಜಿ ಹಿನ್ನಲೆ 2020 ರಲ್ಲಿ ಪದ್ಮಶ್ರೀ ಪ್ರಶಸ್ತಿ ಸಹ ಲಭಿಸಿತ್ತು. ತುಳಸಿ ಗೌಡ ನಿಧನಕ್ಕೆ ಶಾಸಕ ಸತೀಶ್ ಸೈಲ್, ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೇರಿ ಹಲವು ಗಣ್ಯರಿಂದ ಸಂತಾಪ ಸೂಚಿಸಿದ್ದಾರೆ..
ಗಮನಿಸಿ
- Teacher suspended/ವಿದ್ಯಾರ್ಥಿಗೆ ಥಳಿಸಿದ ಪ್ರಕರಣ : ಶಿಕ್ಷಕಿ ಅಮಾನತು.
- Varamahalakshmi Festival, ಶ್ರಾವಣದ ಶುಕ್ರವಾರ, ಮನೆ ಮನೆಗಳಲ್ಲಿ ವರಮಹಾಲಕ್ಷ್ಮಿ ಭಕ್ತಿ ಸಡಗರ
- Teacher/ಪಾಠ ಕಲಿಯಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗೆ ಥಳಿತ : ಬಾಸುಂಡೆ ಮೂಡಿಸಿದ ಶಿಕ್ಷಕಿ
- ಭಟ್ಕಳದ ಹಳೆಯ ಕಾಲ ಮುಕ್ತಾಯ – ನಗರಸಭೆಯ ಹೊಸ ಯುಗ ಆರಂಭ ! ಮಂಕಾಳು ವೈದ್ಯ ಸಚಿವರಾದ ಬಳಿಕ ಭಟ್ಕಳಿಗರ ಕನಸು ನನಸು