ಸುದ್ದಿಬಿಂದು ಬ್ಯೂರೋ ವರದಿ
ಹಳಿಯಾಳ : ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ರಸ್ತೆಯ ಡೊಂಕನಾಳ ಸಮೀಪ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರರಾದ ಭಗವತಿಯ ಸಿದ್ದು ಬೈರು ಜೊರೆ (19)ಹಾಗೂ ಜಾನಾಬೈ ಸಕಾರಾಮ ಪಾಂಡುರಮಸೆ (35), ಎಂಬುವವರೆ ಮೃತಪಟ್ಟ ಬೈಕ್ ಸವಾರರಾಗಿದ್ದಾರೆ. ಇಬ್ಬರೂ ಸಹ ಬೈಕ್ನಲ್ಲಿ ಯಲ್ಲಾಪುರದಿಂದ ಹಳಿಯಾಳಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ.
ಅಪಘಾತ ಸ್ಥಳಕ್ಕೆ ಹಳಿಯಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಈ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಮನಿಸಿ