ಸುದ್ದಿಬಿಂದು ಬ್ಯೂರೋ ವರದಿ
Belagavi ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳರ್ ಅವರು ಪ್ರಯಾಣಿಸುತ್ತಿದ್ದ ಕಾರು ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಇಂದು ಮುಂಜಾನೆ 5ಗಂಟೆ ಸುಮಾರಿಗೆ ಅಪಘಾತವಾಗಿದೆ. ಅಪಘಾತದಲ್ಲಿ ಗಾಯಗೊಂಡ ಲಕ್ಷ್ಮೀ ಹೆಬ್ಬಾಳಕರ್‌ ಹಾಗೂ ಅವರ ಸಹೋದರನಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಕ್ಷ್ಮೀ ಹೆಬ್ಬಾಳಕರ್ ಮತ್ತು ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಪ್ರಯಾಣಿಸುತ್ತಿದ್ದ ಕಾರು ಅಂಬಡಗಟ್ಟಿ ಬಳಿ ಅಪಘಾತಕ್ಕೀಡಾಯಿತು, ಅದೃಷ್ಟವಶಾತ್ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಅವರ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಪ್ರಯಣಿಸುತ್ತಿದ್ದ ವೇಳದ ನಾಯಿ ಅಡ್ಡ ಬಂದಿದ್ದು  ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ,

ಬೆಂಗಳೂರಿನಿಂದ ಬೆಳಗಾವಿಗೆ ರಸ್ತೆ ಮೂಲಕ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅಪಘಾತದಿಂದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಬೆನ್ನು ಮತ್ತು ಮುಖಕ್ಕೆ ಸ್ವಲ್ಪ ಗಾಯವಾಗಿದೆ.

ಗಮನಿಸಿ