ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಸರಕಾರಿ ಪ್ರೌಢಶಾಲೆ ಬರ್ಗಿಯಲ್ಲಿ ಜಯಾನಂದ ಪಟಗಾರ ಬರ್ಗಿ, ನಿವೃತ್ತ ಅಗ್ನಿಶಾಮಕ ಠಾಣಾಧಿಕಾರಿ ಇವರು ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್,ಪೆನ್ನು ಮತ್ತು ಸಿಹಿ ವಿತರಿಸಿದರು .

ಅಗ್ನಿ ಅವಘಡಗಳು ಸಂಭವಿಸಿದಾಗ ತೆಗೆದು ಕೊಳ್ಳುವ ಸುರಕ್ಷತಾ ಕ್ರಮಗಳು ಮತ್ತು ನೀರಿನಲ್ಲಿ ಮುಳುಗಿರುವ ವ್ಯಕ್ತಿಗಳನ್ನು ರಕ್ಷಣೆ ಮಾಡುವ ವಿಧಾನಗಳ ಕುರಿತು ಉಪನ್ಯಾಸ ನೀಡಿದರು. ಅವರಿಗೆ ಶಾಲಾ SDMC, ಮುಖ್ಯಾಧ್ಯಾಪಕರು ಮತ್ತು ಶಿಕ್ಷಕವೃಂದ , ವಿದ್ಯಾರ್ಥಿಗಳು ಮತ್ತು ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ.

ಕಾರ್ಯಕ್ರಮದಲ್ಲಿ SDMC ಅಧ್ಯಕ್ಷರಾದ ಸುರೇಶ ಪಟಗಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯಾಧ್ಯಾಪಕ ಪಎಂ.ಕೆ.ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸರ್ವರನ್ನೂ ಸ್ವಾಗತಿಸಿದರು.ಶಿಕ್ಷಕ ಪಿ.ಎನ್.ನಾಯ್ಕ ವಂದಿಸಿದರು.ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ