ಸುದ್ದಿಬಿಂದು ಬ್ಯೂರೊ ವರದಿ
ಕಾರವಾರ : ಉತ್ತರ ಕನ್ನಡ ಜಿಲ್ಲಾ ಗೃಹ ರಕ್ಷಕ ದಳ ದಲ್ಲಿ 140 ಜನರಿಗೆ ಹೊಸದಾಗಿ ಸೇರ್ಪಡೆಗೊಳಿಸಿಕೊಳ್ಳಲಾಗುವುದು.‌ ಆಸಕ್ತಿ ಇದ್ದವರು ಹತ್ತನೇ ತರಗತಿ ಪಾಸ್ ಆಗಿರಬೇಕು,19 ವರ್ಷಕ್ಕಿಂತ ಮೇಲ್ಪಟ್ಟ , 50 ವರ್ಷ ದೊಳಗಿನ ಪುರುಷ ಮತ್ತು ಮಹಿಳೆಯರಿಗೆ ಮುಕ್ತ ಅವಕಾಶ ಇದೆ ಎಂದು ಹೋಂ ಗಾರ್ಡ್ ಜಿಲ್ಲಾ ಕಮಾಂಡೆಂಟ್ ಡಾ.ಸಂಜು ನಾಯಕ ತಿಳಿಸಿದ್ದಾರೆ.

ಕಂಪ್ಯೂಟರ್ ಜ್ಞಾನ ಇದ್ದವರಿಗೆ, ಹೆವಿ ಡ್ರೈವಿಂಗ್ ಲೈಸೆನ್ಸ್, ಅಡುಗೆ ಭಟ್ಟರು, ಮೆಕಾನಿಕ್, ಪೈಂಟರ್, ಪ್ಲಂಬರ್ ಹಾಗೂ ಎನ್. ಸಿ.ಸಿ. ಮತ್ತು ಕ್ರೀಡಾಕೂಟದಲ್ಲಿ ಉತ್ತಮ ಸಾಮರ್ಥ್ಯ ಇದ್ದವರಿಗೆ ಮೊದಲ ಪ್ರಾಶಸ್ತ್ಯ ನೀಡಿ ನೇಮಕಾತಿ ಮಾಡಿಕೊಳ್ಳಾಗುತ್ತದೆ. ಅರ್ಜಿಯನ್ನು ಗೃಹ ರಕ್ಷಕ ದಳದ ಜಿಲ್ಲಾ ಕಛೇರಿ, ಸರ್ವೋದಯ ನಗರ, ದಿವೆಕರ್ ಕಾಮರ್ಸ್ ಕಾಲೇಜ್ ಎದುರು, ಕೊಡಿಭಾಗ, ಕಾರವಾರ ಇಲ್ಲಿ ಅರ್ಜಿಯನ್ನು ಉಚಿತವಾಗಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಮಾರ್ಚ 3ಕೊನೆಯ ದಿನವಾಗಿದ್ದು, ಮೆಡಿಕಲ್ ಫಿಟ್ನೆಸ್ ಸರ್ಟಿಫಿಕೇಟ್ ಜೊತೆಗೆ ಆಧಾರ ಕಾರ್ಡ ಮತ್ತು ಎಸ್.ಎಸ್.ಎಲ್. ಸಿ ಮಾರ್ಕ್ಸ್ ಕಾರ್ಡನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕೃತ ಮಾಡಿಕೊಂಡು ಅರ್ಜಿ ಜೊತೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08382 -200137 / 226361 ಅಥವಾ 9480898775 ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ