ಸುದ್ದಿಬಿಂದು ಬ್ಯೂರೋ ವರದಿ
ಡೆಹಲಿ: ಕಾಂಗ್ರೆಸ್ ನಾಯಕಿ ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಸ್ವಸ್ಥರಾಗಿದ್ದಾರೆ ಎನ್ನುವ ಬಗ್ಗೆ ವರದಿಯಾಗಿದೆ.ನವದೆಹಲಿ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ
.

ಸದ್ಯ, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರು ಶುಕ್ರವಾರ (ಫೆಬ್ರವರಿ 21) ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲೆಯಾಗಿದ್ದಾರೆ. ಅವರ ಆಸ್ಪತ್ರೆ ದಾಖಲಾತಿಯ ನಿಖರವಾದ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ. ಆದರೆ, ತಜ್ಞ ವೈದ್ಯರ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೋನಿಯಾ ಗಾಂಧಿ ಕಳೆದ ವಾರ ಫೆಬ್ರವರಿ 13 ರಂದು ಬಜೆಟ್ ಅಧಿವೇಶನದ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಮಕೊನೆಗೊಮ್ಮೆ ಕಾಣಿಸಿಕೊಂಡಿದ್ದರು. ಅವರು ಅಧಿವೇಶನದಲ್ಲಿ ಪಾಲ್ಗೊಂಡು ಚುನಾವಣೆ ವಿಳಂಬದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಆದರೆ, ಫೆಬ್ರವರಿ 13 ನಂತರ ಅವರು ರಾಜ್ಯಸಭೆಯಲ್ಲಿ ಕಾಣಿಸಿಕೊಂಡಿಲ್ಲ. ಇದೀಗ ಆರೋಗ್ಯದ ಸಮಸ್ಯೆ ಎದುರಿಸಿ ಆಸ್ಪತ್ರೆಗೆ ದಾಖಲಾದರು ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ